7th Pay Commission ಸಮಸ್ತ ಕರ್ನಾಟಕ ಜನತೆಗೆ ನಮಸ್ಕಾರಗಳು ಸ್ನೇಹಿತರೇ, ಇಂದಿನ ನಮ್ಮ ಈ ಲೇಖನದಲ್ಲಿ 7th pay commission ನ ಕುರಿತು ಅಂದರೆ 7ನೇ ವೇತನ ಆಯೋಗ ಶಿಫಾರಸ್ಸು ಗೆ ರಾಜ್ಯದ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ, ಇದರ ಕುರಿತು ಈ ಲೇಖನದಲ್ಲಿ ತಿಳಿಯೋಣ.
ಹಾಗಾಗಿ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ ಮಾಹಿತಿ ಉಪಯುಕ್ತವಾಗಿದೆ. ಹೌದು ಸ್ನೇಹಿತರೇ ಕೊನೆಗೂ ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರ ಹೊಸ ಶುಭ ಸುದ್ದಿ ನೀಡಿದೆ. ಸರ್ಕಾರಿ ನೌಕರರಿಗೆ ವೇತನ ಹೆಚ್ಚಳಿಗೆ ಗ್ರೀನ್ ಸಿಗ್ನಲ್ ನೀಡಿದೆ. ಇದರ ಕುರಿತು ಸಂಪುಟ ಸಭೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ನೌಕರರ 7ನೇ ವೇತನ ಆಯೋಗಕ್ಕೆ ಒಪ್ಪಿಗೆ
ಹೌದು ಸ್ನೇಹಿತರೇ, ಸರ್ಕಾರಿ ನೌಕರರ ಈ ಮನವಿಗೆ ಅಂದರೆ 7 ನೇ ವೇತನ ಆಯೋಗ ಶಿಫಾರಸ್ಸು ಮಾಡಲು ಸಿಎಂ ಸಿದ್ಧರಾಮಯ್ಯ ನವರು ಒಪ್ಪಿಗೆ ನೀಡಿದ್ದಾರೆ. ಸೋಮವಾರದಂದು ನಡೆದ ಕೊನೆಯ ದಿನದ ಸಂಪುಟ ಸಭೆಯಲ್ಲಿ ವೇತನ ಹೆಚ್ಚಳದ ಕುರಿತು ಚರ್ಚೆ ಮಾಡಲಾಗುತ್ತಿದೆ.
ಅಂದು ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದ ನೌಕರರಿಗೆ 7 ನೇ ವೇತನ ಆಯೋಗ ಶಿಫಾರಸ್ಸು ಮಾಡುವುದರ ಕುರಿತು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದಕ್ಕೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ ಎಸ್ ಷಡಕ್ಷರಿ ಅವರು ಎಲ್ಲಾ ಸಂಪುಟ ಸಭೆಯಲ್ಲಿ ಇದ್ದ ಸಚಿವರಿಗೆ, ಸಿಎಂ ಸಿದ್ಧರಾಮಯ್ಯ ಹಾಗು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ತಮ್ಮ ಅಭಿನಂದನೆ ತಿಳಿಸಿದ್ದಾರೆ.
7ನೇ ವೇತನ ಆಯೋಗ ಯಾವಾಗ ಜಾರಿಗೆ ಬರುವುದು
ಪಂಚ ಗ್ಯಾರಂಟೀ ಗಳ ಮದ್ಯದಲ್ಲಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಿದೆ. 7 ನೇ ವೇತನ ಆಯೋಗ ಶಿಫಾರಸ್ಸು ಮಾಡಲು ಸಂಪುಟ ಸಭೆಯಲ್ಲಿ ತಿಳಿಸಿ, 1,ಆಗಸ್ಟ್ 2024 ರಂದು ಇದು ಜಾರಿಗೆ ಬರುವುದಾಗಿ ಮಾಹಿತಿ ನೀಡಿದ್ದಾರೆ. 27.50% ರಷ್ಟು ವೇತನ ಪರಿಷ್ಕರಣೆಗೆ ತೀರ್ಮಾನಿಸಲಾಗಿದೆ.
ಎಷ್ಟರಿಂದ ಎಷ್ಟು ರೂಪಾಯಿಗೆ ವೇತನ ಹೆಚ್ಚಳ ಮಾಡಲಾಗಿದೆ:
27.50 ರಷ್ಟು ವೇತನ ಅನುಮೋದನೆ ಮಾಡುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ನೌಕರರಿಗೆ ವೇತನವನ್ನು ಕನಿಷ್ಟ 17,000/- ರೂ.ಗಳಿಂದ 27,000/- ರೂ.ಗಳ ವರೆಗೆ ಹೆಚ್ಚಳ ಮಾಡಲಾಗಿದೆ. ಇದು ಮುಂದಿನ ತಿಂಗಳು ಆಗಸ್ಟ್ 1, ರಿಂದ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: Masked Aadhaar Card: ಮೊಬೈಲ್ ಬಳಸಿ ಈ ರೀತಿ ಡೌನ್ಲೋಡ್ ಮಾಡಿ!! ಸುಲಭವಾದ ವಿಧಾನ ಇಲ್ಲಿದೆ ಜನರಿಗಾಗಿ