ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಕಾಂಗ್ರೆಸ್ ಸರ್ಕಾರದ ಬಹು ಮಹತ್ವ ಇರುವಂತಹ ಯೋಜನೆ ಅಂದರೆ ಅದು ಗೃಹಲಕ್ಷ್ಮಿ ಯೋಜನೆ. ಗೃಹಲಕ್ಷ್ಮಿ ಯೋಜನೆಯ ಹಣವು ಲೋಕಸಭಾ ಚುನಾವಣೆ ಮುಗಿದ ನಂತರ ನಮಗೆ ಸರಿಯಾಗಿ ಬರುತ್ತಿಲ್ಲ ಎಂದು ಸಾಕಷ್ಟು ಫಲಾನುಭವಿಗಳು ಪ್ರಶ್ನಿಸುತ್ತಿದ್ದಾರೆ.
ಸುಮಾರು ಎರಡು ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಲಾಖೆಯು ಫಲಾನುಭವಿಗಳ ಖಾತೆಗೆ ಸರಿಯಾಗಿ ಜಮಾ ಮಾಡುತ್ತಿಲ್ಲ. ಇದರ ಬಗ್ಗೆ ಕರ್ನಾಟಕದಲ್ಲಿ ಎಲ್ಲೆಡೆ ಆಕ್ರೋಶವನ್ನು ಫಲಾನುಭವಿಗಳು ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಸರ್ಕಾರದ ಪ್ರತಿಕ್ರಿಯೆ ಏನು ಇದರ ಬಗ್ಗೆ ವಿವರವಾಗಿ ಇದೇ ಕೊನೆಯಲ್ಲಿ ತಿಳಿಸುತ್ತೇವೆ.
ಎರಡು ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಬಂದ್
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸುಮಾರು ಜೂನ್ ತಿಂಗಳಿನಿಂದ ಸರಿಯಾಗಿ ಖಾತೆಗೆ ಜಮಾ ಮಾಡಿಲ್ಲ.
ಮೇ ತಿಂಗಳಿನ ಹಣವು ಜೂನ್ ತಿಂಗಳಿನಲ್ಲಿ ಬಂದಿದೆ ಹಾಗೂ ಜೂನ್ ಮತ್ತು ಜುಲೈ ತಿಂಗಳಿನ ಹಣ ಫಲಾನುಭವಿಗಳಿಗೆ ಬಂದಿಲ್ಲ. ಇದರ ಬಗ್ಗೆ ಕರ್ನಾಟಕದಲ್ಲಿ ಎಲ್ಲಾ ಕಡೆ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ
ಫಲಾನುಭವಿಗಳಿಗೆ ಎರಡು ತಿಂಗಳಿನಿಂದ ಸರಿಯಾಗಿ ಯೋಜನೆಯ ಹಣ ಯಾಕೆ ಬರುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಪ್ರಶ್ನಿಸಲಾಗುತ್ತಿದೆ. ಇದಕ್ಕೆ ಇಲಾಖೆಯು ಸರ್ಕಾರ ನಮಗೆ ಸರಿಯಾಗಿ ಹಣ ನೀಡಿಲ್ಲ ಆದ್ದರಿಂದ ನಾವು ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದೆ.
ಒಂದು ತಿಂಗಳಿಗೆ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಫಲಾನುಭವಿಗಳಿಗೆ ಹಣವನ್ನು ಹಾಕಲು ಸುಮಾರು 2,100 ರಿಂದ 2300 ಕೋಟಿ ವರೆಗೂ ಅನುದಾನವನ್ನು ಕೊಡಬೇಕಾಗುತ್ತದೆ. ಕರ್ನಾಟಕದಲ್ಲಿ ಒಂದು ಕೋಟಿ ಇಪ್ಪತ್ತು ಲಕ್ಷ ಜನ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಆಗಿದ್ದಾರೆ.
ಇದರ ವಿಷಯವಾಗಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆಯು ಸರ್ಕಾರಕ್ಕೆ ಅನುದಾನ ನೀಡುವಂತೆ ಮನವಿಯನ್ನು ಸಲ್ಲಿಸಿದ್ದಾರೆ. ಸರ್ಕಾರವು ಇಲಾಖೆಗೆ ಅನುದಾನವನ್ನು ನೀಡಿದರೆ ಮಾತ್ರ ಜನರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಲು ಸಾಧ್ಯ ಎಂದು ಇಲಾಖೆಯ ತಿಳಿಸಿದೆ.
ಗೃಹಲಕ್ಷ್ಮಿ ಯೋಜನೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ:
ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬಿಡುಗಡೆ ಆಗದಿರುವ ವಿಷಯವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೇ ತಿಂಗಳಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಎಲ್ಲಾ ಫಲಾನುಭವಿಗಳಿಗೆ ಈಗಾಗಲೇ ಬಿಡುಗಡೆ ಮಾಡಿದ್ದೇವೆ. ಜೂನ್ ಮತ್ತು ಜುಲೈ ತಿಂಗಳಿನ ಹಣ ಮಾತ್ರ ಬಿಡುಗಡೆ ಮಾಡುವುದು ಬಾಕಿ ಇದೆ.
ಆದಷ್ಟು ಬೇಗ ಜೂನ್ ಮತ್ತು ಜುಲೈ ತಿಂಗಳಿನ ಹಣವನ್ನು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಿಡುಗಡೆ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: ಜೂನ್ ತಿಂಗಳ ಹಣ ಇನ್ನು ಬಂದಿಲ್ಲ? ಅರ್ಜಿ ಸಲ್ಲಿಸಿ 10 ತಿಂಗಳು ಕಳೆದರೂ ಹಣ ಬಂದಿಲ್ಲ?