ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದ್ದ 5 ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಒಂದು ದೊಡ್ಡ ಶಾಪಿಂಗ್ ಅಪ್ಡೇಟ ಬಂದಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಾಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿತ್ತು. ಈಗ ಲೋಕಸಭೆಯ ಚುನಾವಣೆ ಮುಗಿದ ಮೇಲೆ ಈ ಐದು ಯೋಜನೆಗಳನ್ನು ರದ್ದು ಮಾಡಲು ಕೆಲವೊಂದು ಚರ್ಚೆಗಳು ನಡೆಯುತ್ತಿವೆ.
ಹಾಗಾದರೆ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಜಾರಿಗೆ ತಂದಿದ ಐದು ಯೋಜನೆಗಳನ್ನು ರದ್ದು ಮಾಡಲಾಗುವುದ? ಇದರ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಏನು ಹೇಳಿದ್ದಾರೆ ಹಾಗೂ ಈ ವಿಚಾರವಾಗಿ ಪೂರ್ತಿ ಮಾಹಿತಿಯನ್ನು ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ.!
ಕರ್ನಾಟಕದ ಫಲಿತಾಂಶದಿಂದ ಕಾಂಗ್ರೆಸ್ಗೆ ಗೊಂದಲ.!
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಸುಮಾರು 20 ಸೀಟ್ಗಳನ್ನು ಗೆಲ್ಲುತ್ತೇವೆ ಎಂದು ಭರವಸೆಯನ್ನು ಇಟ್ಟುಕೊಂಡಿದ್ದರು. ಆದರೆ ಈಗ ಚುನಾವಣೆಯ ಫಲಿತಾಂಶ ಹೊರಬಂದಿದೆ ಹಾಗೂ ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವು ಉಂಟಾಗಿದೆ. ಯಾಕೆಂದರೆ ಲೋಕಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಕೇವಲ 9 ಸೀಟ್ ಗಳು ದೊರೆತಿವೆ.
ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ಹಾಗೂ ಅದರ ಲಾಭವನ್ನು ಸಾಕಷ್ಟು ಕರ್ನಾಟಕದ ಜನರು ಪಡೆಯುತ್ತಿದ್ದರು ತಮಗೆ ಕೇವಲ ಒಂಬತ್ತು ಸೀಟ್ಗಳು ಕರ್ನಾಟಕದಲ್ಲಿ ದೊರೆತಿವೆ ಎಂಬ ಗೊಂದಲ ಕಾಂಗ್ರೆಸ್ ಪಕ್ಷಕ್ಕೆ ಉಂಟಾಗಿದೆ.
ಗ್ಯಾರೆಂಟಿ ಯೋಜನೆಗಳನ್ನು ರದ್ದು ಮಾಡಲು ಶಾಸಕರ ಮನವಿ.
ಸ್ನೇಹಿತರೆ ಈಗ ಬಂದಿರುವ ಚುನಾವಣೆಯ ಫಲಿತಾಂಶದಿಂದ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಲ್ಲಿ ಕೇವಲ ಒಂಬತ್ತು ಸೀಟ್ಗಳು ದೊರೆತಿವೆ. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಉಂಟಾಗಿದ್ದು ಸರ್ಕಾರ ಕರ್ನಾಟಕದಲ್ಲಿ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಶಾಸಕರು ಸಿಎಂ ಸಿದ್ದರಾಮಯ್ಯನವರಿಗೆ ಮನವಿಯನ್ನು ಮಾಡುತ್ತಿದ್ದಾರೆ.
ರದ್ದು ಮಾಡುವ ವಿಷಯವಾಗಿ ಸಿಎಂ ಸ್ಪಷ್ಟನೆ ನೀಡಿದ್ದಾರೆ:
ಸಿಎಂ ಸಿದ್ದರಾಮಯ್ಯನವರು ನಮಗೆ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಸೀಟ್ಗಳು ದೊರಕಿವೆ.
ಹಾಗಂದರೆ ನಮ್ಮ ಗ್ಯಾರಂಟಿ ಯೋಜನೆಗಳು ಜನರಿಗೆ ಉಪಯೋಗವಾಗುತ್ತಿದೆ ಹಾಗೂ ತಲುಪುತ್ತಿದೆ ಎಂದು ಅರ್ಥ. ಆದ್ದರಿಂದ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಮಹಾಲಕ್ಷ್ಮಿ ಯೋಜನೆ ವರುಷಕ್ಕೆ 1 ಲಕ್ಷ ರೂ ಹಣ!!