ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿಷಯವಾಗಿ ಕರ್ನಾಟಕದ ಜನರಿಗೆ ದೊಡ್ಡ ಶಾಕಿಂಗ್ ನ್ಯೂಸ್ ಅನ್ನುನೀಡಿದೆ.
ಸ್ನೇಹಿತರೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳು ದೊರಕಿದ್ದು ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿತ್ತು. ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಗೆಲ್ಲಲು ಏಕೈಕ ಕಾರಣ ಏನೆಂದರೆ ಎಲ್ಲರಿಗೂ ತಿಳಿದಿರುವ ಹಾಗೆ ಕಾಂಗ್ರೆಸ್ ಪಕ್ಷವು ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳು.
ಗ್ಯಾರಂಟಿ ಯೋಜನೆಗಳು ಚುನಾವಣೆಗಾಗಿ ಮಾಡಿದ್ದ ಮಾಸ್ಟರ್ ಪ್ಲಾನ್
ಕಾಂಗ್ರೆಸ್ ಸರ್ಕಾರವು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದರು. ಹಾಗೂ ಇಲ್ಲಿಯವರೆಗೂ ಎಲ್ಲಾ ಗ್ಯಾರಂಟಿ ಯೋಜನೆಗಳ ಹಣವನ್ನು ಫಲಾನುಭವಿಗಳು ಪಡೆಯುತ್ತಿದ್ದರು.
ಮಧ್ಯದಲ್ಲಿ ಸಾಕಷ್ಟು ಜನ ಗ್ಯಾರಂಟಿ ಯೋಜನೆಗಳ ಬಗ್ಗೆ ಎಚ್ಚರಿಕೆಯನ್ನು ನೀಡುತ್ತಿದ್ದರು. ಈ ಗ್ಯಾರಂಟಿ ಯೋಜನೆಗಳನ್ನು ತುಂಬಾ ದಿನದವರೆಗೆ ನಡೆಸಲು ಸಾಧ್ಯವಾಗುವುದಿಲ್ಲ. ಇದು ಚುನಾವಣೆ ದಿನಗಳಲ್ಲಿ ಭರವಸೆ ಕೊಟ್ಟಷ್ಟು ಸುಲಭವಂತು ಅಲ್ಲವೇ ಅಲ್ಲ. ರಾಜ್ಯ ಸರ್ಕಾರವು ಒದ್ದಾಡುವಂತ ಸಂದರ್ಭ ಬರುತ್ತದೆ ಹಾಗೂ ಮುಂದೆ ದಿವಾಳಿ ಆಗಬಹುದು.
ಇದರಿಂದ ಯಾವುದೇ ರೀತಿಯ ಅಭಿವೃದ್ಧಿಗಳನ್ನು ಮಾಡಲು ಸಾಧ್ಯವಾಗುವುದಿಲ್ಲ ಹಾಗೂ ಅನುದಾನ ಸಿಗದೇ ನಿಮ್ಮ ಪಕ್ಷದ ಶಾಸಕರೇ ರೊಚ್ಚಿಗೆ ಹೇಳುವ ಪರಿಸ್ಥಿತಿ ಬರುತ್ತದೆ. ಈ ರೀತಿಯ ಎಚ್ಚರಿಕೆಗಳನ್ನು ರಾಜ್ಯ ಸರ್ಕಾರಕ್ಕೆ ಸಾಕಷ್ಟು ಜನ ಈ ಹಿಂದೆಯೇ ನೀಡಿದ್ದರು.
ಬಿಜೆಪಿ ಸರ್ಕಾರದಂತೆ ನಾವು 40% ಕಮಿಷನ್ ಪಡೆಯುವುದಿಲ್ಲ
ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಎಚ್ಚರಿಕೆಯನ್ನು ನೀಡುತ್ತಿದ್ದಾಗ ಕಾಂಗ್ರೆಸ್ ಸರ್ಕಾರದ ಶಾಸಕರು ಹಾಗೂ ಸಿಎಂ ಮತ್ತು ಡಿಸಿಎಂ ಇದರ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದರು. ಬಿಜೆಪಿ ಸರ್ಕಾರವು ಅಧಿಕಾರದಲ್ಲಿ ಇದ್ದಾಗ 40% ಕಮಿಷನ್ ಅನ್ನು ಪಡೆಯುತ್ತಿದ್ದು.
ನಾವು ಈ ರೀತಿ ಕಮಿಷನ್ ಅನ್ನು ಪಡೆಯುವುದಿಲ್ಲ ಅದೇ ದುಡ್ಡನ್ನು ಗ್ಯಾರಂಟಿ ಯೋಜನೆಗಳಾಗಿ ಹಾಕುತ್ತೇವೆ ಎಂದು ಸಮರ್ಥಿಸಿಕೊಂಡಿದ್ದರು. ಆದ್ದರಿಂದ ಗ್ಯಾರಂಟಿ ಯೋಜನೆಗಳು ಸಲೀಸಾಗಿ ನಡೆದುಕೊಂಡು ಹೋಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿಯನ್ನು ನಾವು ಸರಿಯಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದ್ದರು.
ಸುಮಾರು ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಬಂದ್
ಈ ಹಿಂದೆ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದಾಗ ರಾಜ್ಯ ಸರ್ಕಾರವು ನಾವು ಎಲ್ಲವನ್ನು ಸರಿಯಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರು. ಆದರೂ ಕೂಡ ಸಾಕಷ್ಟು ಜನರು ಇದು ಎಲೆಕ್ಷನ್ ಮುಗಿಯುವವರೆಗೂ ಮಾತ್ರ ನಡೆಯುತ್ತದೆ ಎಂದು ಹೇಳಿದ್ದರು.
ಈಗ ಲೋಕಸಭಾ ಎಲೆಕ್ಷನ್ ಮುಗಿದ ನಂತರ ಸುಮಾರು ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಬರುತ್ತಿಲ್ಲ. ಇದರ ಜೊತೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಬದಲಿನ ಹಣ ಕೂಡ ಫಲಾನುಭವಿಗಳಿಗೆ ಸುಮಾರು ತಿಂಗಳಿನಿಂದ ಬಂದಿಲ್ಲ. ಇದರಿಂದ ಕರ್ನಾಟಕದ ಜನರಿಗೆ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿದೆಯಾ ಎಂದು ಗೊಂದಲ ಉಂಟಾಗಿದೆ.
ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು
ಕಾಂಗ್ರೆಸ್ ಸರ್ಕಾರವು ಬಜೆಟ್ ನಲ್ಲಿ 56,000 ಕೋಟಿಯನ್ನು ಗ್ಯಾರೆಂಟಿ ಯೋಜನೆಗಳಿಗೆ ಮೀಸಲು ಇಟ್ಟಿದ್ದರು. ಆದರೆ ಈಗ ಸರ್ಕಾರದ ಪರಿಸ್ಥಿತಿ ವಿಪರೀತವಾಗಿದೆ ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲ ಎನ್ನುವ ಪರಿಸ್ಥಿತಿ ಉಂಟಾಗಿದೆ.
ಸಾಕಷ್ಟು ಸಮಸ್ಯೆಗಳು ಕರ್ನಾಟಕದಲ್ಲಿ ಉಂಟಾಗುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ ಏಕೆಂದರೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ.
ಕರ್ನಾಟಕದ ಶಾಸಕರಿಗೆ ಯಾವುದೇ ರೀತಿಯ ಅನುದಾನ ಸಿಗುತ್ತಿಲ್ಲ ಇದರಿಂದ ಕಾಂಗ್ರೆಸ್ ಪಕ್ಷದ ಶಾಸಕರ ಮಧ್ಯೆ ಅಸಮಾಧಾನ ಉಂಟಾಗಿದೆ. ಇದರ ಜೊತೆ ಪ್ರಮುಖ ನಾಯಕರೇ ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದಲ್ಲಿ ನಿಲ್ಲಿಸಬೇಕು ಎಂದು ಹೇಳುತ್ತಿದ್ದಾರೆ.
BPL Card Ban: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ಸುದ್ದಿ!!ಬಿಪಿಎಲ್ ಕಾರ್ಡ್ ರದ್ದು?
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದರೆ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಡೆದ:
ಈಗ ರಾಜ್ಯ ಸರ್ಕಾರಕ್ಕೆ ಉಂಟಾಗಿರುವ ಸಮಸ್ಯೆಗಳಿಂದ ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲ ಹಾಗೂ ಈ ವಿಷಯವಾಗಿ ಕಾಂಗ್ರೆಸ್ ಸರ್ಕಾರದ ಪ್ರಮುಖ ನಾಯಕರೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಇದರ ಬಗ್ಗೆ ಎಲ್ಲಾ ಕಡೆ ಚರ್ಚೆ ನಡೆಯುತ್ತಿದೆ.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಬಂದ್ ಆಗುವುದಿಲ್ಲ
ಕಾಂಗ್ರೆಸ್ ಪಕ್ಷದ ಕೆಲವರು ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬಾರದು ನಡೆಸಿಕೊಂಡು ಹೋಗಬೇಕು. ಒಂದು ವೇಳೆ ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದರೆ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೊಡೆದ ಬೀಳುತ್ತದೆ.
ದೇಶದಲ್ಲಿ ಬೇರೆ ರಾಜ್ಯಗಳಲ್ಲಿ ಚುನಾವಣೆ ಬರುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿದರೆ ಆ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಕರ್ನಾಟಕ ರಾಜ್ಯದಲ್ಲಿ ಸದ್ಯಕ್ಕೆ ಗ್ಯಾರಂಟಿ ಯೋಜನೆಗಳನ್ನು ಬಂದು ಮಾಡುವುದಿಲ್ಲ.
ಗ್ಯಾರಂಟಿ ಯೋಜನೆಗಳಿಗಾಗಿ ಕರ್ನಾಟಕದಲ್ಲಿ ಎಲ್ಲೆಡೆ ಬೆಲೆ ಏರಿಕೆ:
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಡೆಸಿಕೊಂಡು ಹೋಗಲು ಈಗ ಕಾಂಗ್ರೆಸ್ ಸರ್ಕಾರವು ಹೊಸ ಉಪಾಯವನ್ನು ಮಾಡಿದೆ. ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಕಡೆ ಬೆಲೆ ಏರಿಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಇತ್ತೀಚಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಕೂಡ ಸಾಕಷ್ಟು ವೇದಿಕೆಯಾಗಿದೆ.
ಕಾಂಗ್ರೆಸ್ ಸರ್ಕಾರವು SC ST ಗಳಿಗಾಗಿ ಮಾಡಿದ್ದ ಯೋಜನೆಗಳಿಂದ ಕೂಡ ಸುಮಾರು 15000 ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡುತ್ತೇವೆ ಎಂದು ಅಫಿಶಿಯಲ್ ಆಗಿ ಅನೌನ್ಸ್ ಮಾಡಲಾಗಿದೆ.
ಈ ರೀತಿ ಇನ್ನು ಎಲ್ಲೆಲ್ಲಿಂದ ಹಣ ತರುತ್ತಾರೆ ಎಂದು ಗೊತ್ತಿಲ್ಲ ಹಾಗೂ ಎಷ್ಟು ಕಡೆ ಹಾಗೂ ಎಷ್ಟು ಕಡೆ ಬೆಲೆ ಏರಿಕೆ ಮಾಡುತ್ತಾರೆ ಎಂದು ಗೊತ್ತಿಲ್ಲ.